Home ಟಾಪ್ ಸುದ್ದಿಗಳು ಕಾರವಾರ: ರೈಲಿನಲ್ಲಿ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಪತ್ತೆ

ಕಾರವಾರ: ರೈಲಿನಲ್ಲಿ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಪತ್ತೆ

ಕಾರವಾರ: ರೈಲಿನಲ್ಲಿ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಬರೋಬ್ಬರಿ ಎರಡು ಕೋಟಿ ರೂ. ನಗದನ್ನು  ನಗರದ ರೈಲ್ವೆ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಬಂಧಿತ ಆರೋಪಿ. ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತಿದ್ದ ಮನೋಹರ್ ಸಿಂಗ್ ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು. ಈ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಈತನ ಬಳಿ ಇದ್ದ ಬ್ಯಾಗ್ ಅನ್ನು ತಪಾಸಣೆಗೆ ಒಳಪಡಿಸಿದಾಗ ಈತನ ಬಳಿ ಇದ್ದ ಬ್ಯಾಗಿನಲ್ಲಿ 100 ಬಂಡಲ್ ನ ಎರಡು ಕೋಟಿ ಹಣ ಪತ್ತೆಯಾಗಿದೆ.

ಮನೋಹರ್ ಸಿಂಗ್ ಮುಂಬೈನ ಭರತ್ ಬಾಯ್ ಅಲಿಯಾಸ್ ಪಿಂಟೊ ಎಂಬುವರ ಬಳಿ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ. ಮನೋಹರ್ ಸಿಂಗ್ ತನ್ನ ಮಾಲೀಕನಿಂದ ಬ್ಯಾಗ್ ಪಡೆದು ಮಂಗಳೂರಿನಲ್ಲಿ ರಾಜು ಎಂಬವರಿಗೆ ತಲುಪಿಸಲು ಮುಂಬೈನಿಂದ ಮಂಗಳೂರಿಗೆ ಹೊರಟಿದ್ದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.

Join Whatsapp
Exit mobile version