ಸೌದಿ ಅರೇಬಿಯಾ: ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಘಟನೆ ಕಳೆದ ರಾತ್ರಿ ಮದೀನಾ ಸಮೀಪ ಸಂಭವಿಸಿದ ಅಪಘಾತದಲ್ಲಿ ಮೂವರು ಮರಣ ಹೊಂದಿದ್ದಾರೆ.
ಮುಂಡಗೋಡ ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಮೃತರು. ಅವರು ಮತ್ತು ಇತರರು ಉಮ್ರಾ ಯಾತ್ರೆಗೆಂದು ಮಾ.26ರಂದು ಅವರು ಮಕ್ಕಾಕ್ಕೆ ಹೊರಟು ಮದೀನದಲ್ಲಿ ಪ್ರಯಾಣಿಸುವಾಗ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.