ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವಯಂ ನಿವೃತ್ತಿ ಘೋಷಿಸಿದ KAS ಅಧಿಕಾರಿ !

Prasthutha|

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನ ಅಧಿಕಾರಿ ಅನಿಲ್ ಕುಮಾರ್ ಆರ್ (41) ಎರಡು ತಿಂಗಳ ಹಿಂದೆಯೇ ಸ್ವಯಂ ನಿವೃತ್ತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ನವೆಂಬರ್ 23 ರೊಳಗೆ ಸರ್ಕಾರವು ಈ ಅರ್ಜಿಯನ್ನು ಸ್ವೀಕರಿಸಿದರೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಂತಾಗುತ್ತದೆ.

ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಅಭ್ಯರ್ಥಿಗಳ ಹುಡುಕಾಟ ನಡೆಸಿರುವ ಜೆಡಿಎಸ್ ನಿಂದ ಅನಿಲ್ ಕುಮಾರ್ ತುಮಕೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

- Advertisement -

ಒಂದು ವೇಳೆ ಸರ್ಕಾರ ಒಪ್ಪಿಗೆ ನೀಡದಿದ್ದಲ್ಲಿ ಪ್ರಾದೇಶಿಕ ಪಕ್ಷದಿಂದ ಜಿಪಂ ಮಾಜಿ ಸದಸ್ಯ ಹಾಗೂ ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ರಾಮಾಂಜನಯ್ಯ ಅವರನ್ನು ಜೆಡಿಎಸ್ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Join Whatsapp