ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿಗೆ ಹೆಚ್ಚು ಓಟು ನೀಡುವ ಇವಿಎಂಗಳು ಪತ್ತೆ

Prasthutha|

►ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

- Advertisement -


ಕಾಸರಗೋಡು: ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ಬಿಜೆಪಿಗೆ ಹೆಚ್ಚು ಓಟು ನೀಡುವ ಇವಿಎಂಗಳು ಪತ್ತೆಯಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.


ಮತ ಎಣಿಕೆ ಸಂದರ್ಭದಲ್ಲಿ ಎಲ್ಲ ವಿವಿ ಪ್ಯಾಟ್ ಗಳ ವಿವಿ ಪ್ಯಾಟ್ ಚೀಟಿಗಳನ್ನೂ ಎಣಿಸುವಂತೆ ಆದೇಶಿಸಲು ಕೋರಿ ಸಲ್ಲಿಸಲಾಗಿರುವ ಹಲವಾರು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ, ಕೇರಳದ ಕಾಸರಗೋಡಿನಲ್ಲಿ ನಡೆದಿರುವ ಪ್ರಕರಣ ಸಂಬಂಧಿಸಿದಂತೆ ಚುನಾವಣಾಕ್ಕೆಈ ಕುರಿತು ಪರಿಶೀಲನೆ ನಡೆಸಲು ಸೂಚಿಸಿತು.

- Advertisement -


ಕೇರಳದಲ್ಲಿ ಅಣಕು ಮತದಾನ ಫಲಿತಾಂಶಗಳ ಕುರಿತಾದ ವರದಿಯಲ್ಲಿ ಬಿಜೆಪಿಗೆ ಹೆಚ್ಚುವರಿ ಮತಗಳು ಬಿದ್ದಿರುವ ಕುರಿತು ಪ್ರಶಾಂತ್ ಭೂಷಣ್ ಉಲ್ಲೇಖಿಸಿದರು.



Join Whatsapp