Home ಟಾಪ್ ಸುದ್ದಿಗಳು ಕಾಸರಗೋಡು: ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದು MBBS ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದು MBBS ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ರಸ್ತೆ ಹೊಂಡಕ್ಕೆ ಸ್ಕೂಟರ್ ಬಿದ್ದು ರಸ್ತೆಗೆ ಎಸೆಯಲ್ಪಟ್ಟ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಶಿವಾನಿ ಬಾಳಿಗಾ (20) ಮೃತ ವಿದ್ಯಾರ್ಥಿನಿ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಮಹೇಶ್ಚಂದ್ರ ಬಾಳಿಗಾ ಅವರ ಪುತ್ರಿ. ಈಕೆ ಮಣಿಪಾಲ ವಿಶ್ವವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು.


ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version