ಕಾಸರಗೋಡು: ಅತಿಯಾದ ಮೊಬೈಲ್ ಬಳಕೆ ಪ್ರಶ್ನಿಸಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಮಗ

Prasthutha|

ಕಾಸರಗೋಡು: ಅತಿಯಾದ ಮೊಬೈಲ್ ಬಳಕೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಹೆತ್ತ ತಾಯಿಯನ್ನೇ ಮಗ ಕೊಂದಿರುವ ಘಟನೆ ಜಿಲ್ಲೆಯ ಕಣಿಚಿರ ಎಂಬ ಪ್ರದೇಶದಲ್ಲಿ ನಡೆದಿದೆ.
ಜಿಲ್ಲೆಯ ಕಣಿಚಿರ ಎಂಬ ಪ್ರದೇಶದ ರುಕ್ಮಣಿ (63) ಮೃತರು.

- Advertisement -


ಮಗನಿಂದ ಹಲ್ಲೆಗೆ ಒಳಗಾಗಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.


ರುಕ್ಮಣಿ ಅವರ ತಲೆಯನ್ನು ಗೋಡೆಗೆ ಬಡಿದು ಪುತ್ರ ಸುಜಿತ್ ಗಾಯಗೊಳಿಸಿದ್ದ. ಪ್ರಕರಣ ನಡೆದ ಕೂಡಲೇ ಆತನ ಬಂಧನವೂ ಆಗಿತ್ತು.
ಅತಿಯಾಗಿ ಮೊಬೈಲ್ ಬಳಕೆ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿಯ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

Join Whatsapp