Home ಟಾಪ್ ಸುದ್ದಿಗಳು ಕಾಸರಗೋಡು | ದ್ವಿಚಕ್ರ, ಲಾರಿ ನಡುವೆ ಅಪಘಾತ: ವಿದ್ಯಾರ್ಥಿ ಮೃತ್ಯು

ಕಾಸರಗೋಡು | ದ್ವಿಚಕ್ರ, ಲಾರಿ ನಡುವೆ ಅಪಘಾತ: ವಿದ್ಯಾರ್ಥಿ ಮೃತ್ಯು

ಕಾಸರಗೋಡು: ಸ್ಕೂಟರ್’ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ನಡೆದಿದೆ.


ಚಂದ್ರಗಿರಿ ಶಾಲೆಯ ಪ್ಲಸ್ ವನ್ ಕಲಿಯುತ್ತಿದ್ದ ಅಸ್ಬಾಕ್ (18) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.


ಅಸ್ಬಾಕ್ ಬೇಕಲ ಮವ್ವಾಲ್ ನಿವಾಸಿಯಾಗಿದ್ದು, ಈತ ಬೆಳಿಗ್ಗೆ ಸ್ಕೂಟರ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version