ಕಾಸರಗೋಡು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ.
ಚೆಮ್ನಾಡ್ ಕೋಳಿ ಯಡ್ಕದ ಸಫ್ರಜುಲ್ ಅಮಾನ್ (20) ಮೃತಪಟ್ಟವರು.
ಗಂಭೀರ ಗಾಯಗೊಂಡ ಅಮಾನ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಈತ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದನು ಎಂದು ತಿಳಿದು ಬಂದಿದೆ.