Home ಕರಾವಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ; ತಪ್ಪಿದ ಭಾರಿ ಅನಾಹುತ

ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ; ತಪ್ಪಿದ ಭಾರಿ ಅನಾಹುತ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ನಿರ್ಮಾಣಗೊಳ್ಳುತ್ತಿರುವ ಮೇಲ್ಸೇತುವೆ ಕುಸಿದು ಬಿದ್ದ ಘಟನೆ ಪೆರಿಯಾದಲ್ಲಿ ನಡೆದಿದೆ.


ಪಿಲ್ಲರ್‌ಗಳ ಕಾಮಗಾರಿ ಪೂರ್ಣಗೊಂಡಿದ್ದು, ಸ್ಲ್ಯಾಬ್‌ ಕಾಮಗಾರಿ ನಡೆಯುತ್ತಿರುವ ವೇಳೆ ದುರಂತ ಸಂಭವಿಸಿದೆ. ಮೇಲ್ಸೇತುವೆ ಕುಸಿದು ಬೀಳುವ ಸಂದರ್ಭದಲ್ಲಿ ಐದು ಮಂದಿ ಕಾರ್ಮಿಕರು ಕಾಂಕ್ರೀಟ್‌ ಕೆಲಸದಲ್ಲಿ ನಿರತರಾಗಿದ್ದು, ಒಬ್ಬ ಕಾರ್ಮಿಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಕಳಪೆ ಕಾಮಗಾರಿಯಿಂದಾಗಿ ಮೇಲ್ಸೇತುವೆ ಕುಸಿದಿದೆ ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.


ಮೇಘಾ ಕನ್‌ಸ್ಟ್ರನ್‌ ಕಂಪೆನಿ ಚೆಂಗಳದಿಂದ ನೀಲೇಶ್ವರದ ತನಕದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಗುತ್ತಿಗೆ ವಹಿಸಿಕೊಂಡಿದ್ದು, ಮೂರು ಪಾಳಿಯಲ್ಲಿ 24 ಗಂಟೆಗಳ ಕಾಲ ನಿರ್ಮಾಣ ಕಾರ್ಯ ನಡೆಯುತ್ತಿದೆ.

Join Whatsapp
Exit mobile version