550 ದಿನಗಳ ಬಳಿಕ ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ!

Prasthutha|

18 ತಿಂಗಳ ನಂತರ ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ. ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಂತರ ಕಣಿವೆಯಲ್ಲಿ 4 ಜಿ ಸೇವೆಗಳು ಲಭ್ಯವಾಗುತ್ತಿರುವುದು ಇದೇ ಮೊದಲು. ಇಂಟರ್ನೆಟ್ ಸೇವೆಯನ್ನು ಪುನರಾರಂಭಿಸಲಾಗಿದೆ ಎಂದು ಕಾಶ್ಮೀರ ವಿದ್ಯುತ್ ಸುದ್ದಿ ಸೇವೆಯ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ.

- Advertisement -

2019 ಆಗಸ್ಟ್ 5 ರಂದು ಈ ಪ್ರದೇಶದಲ್ಲಿ ಇಂಟರ್ನೆಟ್ ನಿಯಂತ್ರಣಕ್ಕೆ ತರಲಾಗಿತ್ತು. ಇದೇ ವೇಳೆ ಕಣಿವೆಯಲ್ಲಿ ಅಂತರ್ಜಾಲ ಪುನರಾರಂಭಿಸಲಾಗಿರುವುದಕ್ಕೆ  ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ‘4 ಜಿ ಮುಬಾರಕ್, ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆಯನ್ನು ಆಗಸ್ಟ್ 2019 ರ ನಂತರ ಮೊದಲ ಬಾರಿಗೆ ಪ್ರಾರಂಭಿಸಲಾಗಿದೆ. ಯಾವುದೂ ಇಲ್ಲದಿರುವುದಕ್ಕಿಂತ ಉತ್ತಮವಾಗಿದೆ ಈ ತಡವಾಗಿ ಬಂದ 4ಜಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.   

ಜನವರಿ 25 ರಂದು ಕಾಶ್ಮೀರದಲ್ಲಿ 2 ಜಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಕಣಿವೆಯಲ್ಲಿ 4 ಜಿ ಸೇವೆಗಳನ್ನು ಮರುಸ್ಥಾಪಿಸುವ ಸಾಧ್ಯತೆಯನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರ ಸರ್ಕಾರವನ್ನು ಕೋರಿತ್ತು.



Join Whatsapp