ಕಾಶ್ಮೀರಿ ಪಂಡಿತರ ಹತ್ಯಾಕಾಂಡ: ಸಿಬಿಐ ಅಥವಾ ಎನ್ ಐಎ ತನಿಖೆ ಕೋರಿ ಸುಪ್ರೀಂಗೆ ಅರ್ಜಿ

Prasthutha|

ನವದೆಹಲಿ: 1990ರಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯಾಕಾಂಡ ಕುರಿತು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಅಥವಾ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಯಿಂದ ತನಿಖೆ ನಡೆಸಬೇಕು ಎಂದು ಕೋರಿ ಕಾಶ್ಮೀರಿ ಪಂಡಿತರ ಸಂಘಟನೆಯೊಂದು ಸುಪ್ರೀಂಕೋರ್ಟ್ಗೆ ಕ್ಯುರೇಟೀವ್ ಅರ್ಜಿ ಸಲ್ಲಿಸಿದೆ.

- Advertisement -


ಹಿಂಸಾಚಾರದ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 2017ರಲ್ಲಿ ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ʼರೂಟ್ಸ್ ಇನ್ ಕಾಶ್ಮೀರ್ʼ ಸಂಘಟನೆ ಸಲ್ಲಿಸಿರುವ ಅರ್ಜಿ ಪ್ರಶ್ನಿಸಿದೆ. ತೀರ್ಪಿನ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ “ಘಟನೆ ನಡೆದು 27ಕ್ಕೂ ಹೆಚ್ಚು ವರ್ಷಗಳು ಕಳೆದಿವೆ. ಇದರಿಂದ ಅರ್ಜಿಯ ಉದ್ದೇಶ ಫಲಪ್ರದವಾಗದು. ಪುರಾವೆಗಳು ಲಭ್ಯ ಇರುವುದಿಲ್ಲ” ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿತ್ತು.

Join Whatsapp