ಕಾಶ್ಮೀರಿ ಪ್ರತ್ಯೇಕತಾವಾದಿ ಮುಖಂಡ ಮೌಲ್ವಿ ಅಬ್ಬಾಸ್ ಅನ್ಸಾರಿ ನಿಧನ

Prasthutha|

ಕಾಶ್ಮೀರ: ಅಂಜುಮಾನ್ ಎ ಇತ್ತೀಹಾದ್ ಉಲ್ ಮುಸ್ಲಿಮೀನ್ ಸಂಸ್ಥಾಪಕ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಮೌಲ್ವಿ ಅಬ್ಬಾಸ್ ಅನ್ಸಾರಿ ಅವರು ಇಂದು ಕಾಶ್ಮೀರದಲ್ಲಿ ನಿಧನರಾಗಿದ್ದಾರೆ.

- Advertisement -

86 ವರ್ಷದ ಅಬ್ಬಾಸ್ ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು ಶ್ರೀನಗರದ ನವಕದಲ್ ಎಂಬಲ್ಲಿನ ತನ್ನ ನಿವಾಸದಲ್ಲಿ ನಿಧನರಾದರು ಎಂದು ಮೂಲಗಳು ತಿಳಿಸಿವೆ.

ತೀವ್ರ ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ಬಾಸ್ ಅವರನ್ನು ಇತ್ತೀಚೆಗೆ SKIMS ಸೌರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ, ಸಂಸದ ಫಾರೂಕ್ ಅಬ್ದುಲ್ಲಾ ಮತ್ತು ಅಪ್ನಿ ಪಕ್ಷದ ಮುಖ್ಯಸ್ಥ ಮುಹಮ್ಮದ್ ಅಲ್ತಾಫ್ ಬುಖಾರಿ ಎಂಬವರು ಅಬ್ಬಾಸ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

Join Whatsapp