ಕಟೀಲು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ರಂಗಸ್ಥಳದಲ್ಲೇ ನಿಧನ

Prasthutha|

- Advertisement -

ಮಂಗಳೂರು: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಯಕ್ಷಗಾನ ಕಲಾವಿದರೊಬ್ಬರು ನಿಧನರಾಗಿದ್ದಾರೆ.

ಗುರುವಪ್ಪ ಬಾಯಾರು (58)ಮೃತ ಕಲಾವಿದ ಎಂದು ಗುರುತಿಸಲಾಗಿದೆ.

- Advertisement -

ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

Join Whatsapp