Home ಟಾಪ್ ಸುದ್ದಿಗಳು 2ಬಿ ಮೀಸಲಾತಿ ರದ್ದು: ಕಾವೂರು ಮುಸ್ಲಿಮ್ ಒಕ್ಕೂಟ ಖಂಡನೆ

2ಬಿ ಮೀಸಲಾತಿ ರದ್ದು: ಕಾವೂರು ಮುಸ್ಲಿಮ್ ಒಕ್ಕೂಟ ಖಂಡನೆ

ಬೆಂಗಳೂರು: ಹಿಂದುಳಿದ ವರ್ಗಗಳ 2ಬಿ ಅಡಿಯಲ್ಲಿ ಮುಸ್ಲಿಮರಿಗೆ ನೀಡುತ್ತಿದ್ದ ಶೇ. 4% ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಲಿಂಗಾಯುತ ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಕೂಳೂರು ಕಾವೂರು ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸಿದ್ದು, ಅಲ್ಪಸಂಖ್ಯಾತರ ಹಕ್ಕನ್ನು ಕಸಿದುಕೊಳ್ಳುವ ಕೀಳು ಮಟ್ಟಕ್ಕೆ ಸರಕಾರ ಇಳಿದಿರುವುದು ಅತ್ಯಂತ ಘೋರ ದುರಂತವಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಹುಸೈನ್ ರಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದಾರೆ


ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.


2ಬಿ ಮೀಸಲಾತಿ ರದ್ದತಿಯಿಂದ ಮುಸ್ಲಿಮ್ ಅಭ್ಯರ್ಥಿಗಳು ವೈದ್ಯಕೀಯ – 300, ಇಂಜಿನಿಯರಿಂಗ್ – 1700, ದಂತ ವೈದ್ಯಕೀಯ – 50 ಸೀಟುಗಳು ಕಳೆದುಕೊಳ್ಳುತ್ತವೆ. ಮಾತ್ರವಲ್ಲ ಸರ್ಕಾರಿ ಉದ್ಯೋಗದಲ್ಲಿ ವರ್ಷಕ್ಕೆ ಕನಿಷ್ಠ 600 ರಿಂದ 2000 ವರೆಗಿನ ಉದ್ಯೋಗಗಳು ನಷ್ಟವಾಗುತ್ತವೆ ಎಂದು ವರದಿಗಳು ಹೇಳುತ್ತವೆ. ಇದು ಮುಸ್ಲಿಮರನ್ನು ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಮೂಲೆಗುಂಪಾಗಿಸುವ ಷಡ್ಯಂತ್ರದ ಬಾಗವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version