ಬೆಂಗಳೂರು | ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮಾಡ್ಯೂಲರ್ ಐಸಿಯು ಲೋಕಾರ್ಪಣೆ

Prasthutha|

ಬೆಂಗಳೂರು : ಯಾವುದೇ ಸಂಕಷ್ಟದ ಪರಿಸ್ಥಿತಿಯಲ್ಲೂ ತುರ್ತು ಸಂದರ್ಭಗಳಲ್ಲಿ ಅನುಕೂಲವಾಗುವ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.

- Advertisement -

ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಈ ಐಸಿಯು ಆರಂಭಿಸಲಾಗಿದೆ.

100 ಹಾಸಿಗೆಗಳ ಈ ಐಸಿಯು ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲೂ ಜನರಿಗೆ ಅನುಕೂಲವಾಗಲಿದೆ. ದಾನಿಗಳ ನೆರವಿನಿಂದ ಈ ಘಟಕವನ್ನು ಸ್ಥಾಪನೆ ಮಾಡಲಾಗಿದೆ.

- Advertisement -

ಅತ್ಯಂತ ಕಡಿಮೆ ಅವಧಿಯಲ್ಲಿ (3ತಿಂಗಳಲ್ಲಿ) ಮಾಡ್ಯೂಲರ್ ಐಸಿಯು ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ. ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗಿದೆ ಎಂದು ಸಿಎಂ ಯಡಿಯೂರಪ್ಪ ಈ ವೇಳೆ ಮಾತನಾಡುತ್ತಾ ತಿಳಿಸಿದರು.

ಇದೇ ವೇಳೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ದಿನೇಶ್ ಗುಂಡೂರಾವ್, ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೇವಲ ಮೂರೇ ತಿಂಗಳಲ್ಲಿ ಇಂತಹ ಸುಸಜ್ಜಿತ ಹಾಗೂ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಸ್ಥಾಪನೆಯಾಗಿದೆ ಎಂದರೆ, ಅಚ್ಚರಿಯ ಸಂಗತಿಯೇ ಸರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಾ, ಸಿ.ಎನ್. ಅಶ್ವಥನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

Join Whatsapp