Home ಟಾಪ್ ಸುದ್ದಿಗಳು ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟ ಕೆಸಿಆರ್: ಟಿಆರ್ ಎಸ್ ಇನ್ನು ಮುಂದೆ ಬಿಆರ್ ಎಸ್

ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟ ಕೆಸಿಆರ್: ಟಿಆರ್ ಎಸ್ ಇನ್ನು ಮುಂದೆ ಬಿಆರ್ ಎಸ್

ಹೈದರಾಬಾದ್ : ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್ ಎಸ್) ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮರುನಾಮಕರಣ ಮಾಡಿದ್ದಾರೆ.

ಹೈದರಾಬಾದ್ ನ ಪಕ್ಷದ ಕೇಂದ್ರ ಕಚೇರಿ ತೆಲಂಗಾಣ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮರುನಾಮಕರಣದ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ವೇಳೆ ಪಕ್ಷದ ಬೆಂಬಲಿಗರು ಪಟಾಕಿ ಸಿಡಿಸಿ, ಕೆಸಿಆರ್ ಪರ ಘೋಷಣೆ ಕೂಗಿ ಸಂಭ್ರಮ ಆಚರಿಸಿದರು. ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲು ಕೆಸಿಆರ್ ಸಜ್ಜಾಗಿದ್ದಾರೆ.

ಟಿಆರ್ ಎಸ್ ಇನ್ನು ಮುಂದೆ ಬಿಆರ್ ಎಸ್ ಪಕ್ಷವಾಗಿ ಗುರುತಿಸಿಕೊಳ್ಳಲಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ 20 ಶಾಸಕರೊಂದಿಗೆ ಟಿಆರ್ ಎಸ್ ಕೇಂದ್ರ ಕಚೇರಿಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

Join Whatsapp
Exit mobile version