ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರುವಂತೆ ಮೋದಿಗೆ ಕೇಜ್ರಿವಾಲ್ ಮನವಿ

Prasthutha|

ನವದೆಹಲಿ: ಕೋವಿಡ್ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಕಾಣಿಸಿಕೊಂಡ ದೇಶಗಳ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಕಾಣಿಸಿಕೊಂಡ ದೇಶಗಳಿರುವ ವಿಮಾನ ಹಾರಾಟವನ್ನು ನಿಷೇಧಿಸಬೇಕು. ಕಷ್ಟಪಟ್ಟು ನಮ್ಮ ದೇಶ ಕೊರೊನಾದಿಂದ ಚೇತರಿಸಿಕೊಂಡಿದೆ. ಈ ಹೊಸ ರೂಪಾಂತರವು ಭಾರತಕ್ಕೆ ಪ್ರವೇಶಿಸುವುದನ್ನು ಈಗಿನಿಂದಲೇ ತಡೆಯಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ದಕ್ಷಿಣ ಆಫ್ರಿಕಾ ಸೇರಿದಂತೆ ನಾಲ್ಕು ದೇಶಗಳಲ್ಲಿ ಕಾಣಿಸಿಕೊಂಡಿರುವ ಹೊಸ ತಳಿಯ ಒಮಿಕ್ರಾನ್ ಸೋಂಕು ಭಾರತದಲ್ಲೂ ತಲ್ಲಣ ಮೂಡಿಸಿದೆ. ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಲ್ಲಿ ವಿದೇಶಿಗಳಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರಿ ಭಾರತದಲ್ಲಿ ಮೂರನೇ ಅಲೆಯ ಭೀತಿಯ ಹೆಚ್ಚಿಸಿದೆ.

- Advertisement -

ಈ ಸಂಬಂಧ ಇಂದು ಪ್ರಧಾನಿ ನರೇಂದ್ರ ಮೋದಿ ಉನ್ನತ ಅಧಿಕಾರಿಗಳ ಸಭೆ ನಡೆಸಿದರು.

Join Whatsapp