ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ INDIA ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂದು ಎಎಪಿಯ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಅವರು ಜನರಿಗೆ ಅನುಕೂಲವಾಗುವ ಮಾದರಿಯನ್ನು ನೀಡಿದ್ದಾರೆ. ಅವರು ಪ್ರಧಾನಿ ಅಭ್ಯರ್ಥಿ ಆಗಬೇಕೆಂದು ನಾನು ಬಯಸುತ್ತೇನೆ. ಆದರೆ ನಿರ್ಧಾರ ನನ್ನ ಕೈಯಲ್ಲಿಲ್ಲ ಎಂದು ಹೇಳಿದ್ದಾರೆ.