ಶ್ರೀನಗರ: ಎಎಪಿ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದು, ಅರವಿಂದ್ ಕೇಜ್ರಿವಾಲ್ ಇದೀಗ ಜಮ್ಮು ಮತ್ತು ಕಾಶ್ಮೀರದತ್ತ ಕಣ್ಣಿಟ್ಟಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಈ ವಲಯದಲ್ಲಿ ಪಕ್ಷವನ್ನು ಬಲಪಡಿಸಲು ಮುಂದಾಗಿದ್ದಾರೆ.
ಸುಮಾರು 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಜಮ್ಮು ವಲಯದತ್ತ ಎಎಪಿ ಗಮನ ಹರಿಸುತ್ತಿದೆ. ಕ್ಷೇತ್ರ ಪುನರ್ ರಚನೆ ನಂತರ 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿಯಲ್ಲಿ 43 ವಿಧಾನಸಭಾ ಸ್ಥಾನಗಳು ಇರಲಿವೆ.