ದೆಹಲಿ: ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ.
“ಸರ್ಕಾರವನ್ನು ಜೈಲಿನಿಂದ ನಡೆಸುವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಭರವಸೆ ನೀಡಬಲ್ಲೆ” ಸಕ್ಸೇನಾ ಎಂದು ಹೇಳಿದರು.
ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿಯಲ್ಲಿದ್ದು, ಜೈಲಿನಿಂದಲೇ ಎರಡು ಸರ್ಕಾರಿ ಆದೇಶಗಳನ್ನು ಹೊರಡಿಸಿದ್ದಾರೆ.
ಬಂಧನಕ್ಕೊಳಗಾಗಿದ್ದರೂ ಯಾವುದೇ ಕಾರಣ್ಕಕೂ ಕೇಜ್ರಿವಾಲ್ ರಾಜೀನಾಮೆ ನೀಡುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಹೇಳುತ್ತಿದ್ದಾರೆ.
ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತು ಮತ್ತು ನಂತರ ಇಲ್ಲಿನ ನ್ಯಾಯಾಲಯವು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.