ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಂದು ಕೇಜ್ರಿವಾಲ್ ಅವರ ಈಡಿ ಕಸ್ಟಡಿ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು.