ನವದೆಹಲಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಟೀಕಿಸಿದ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ‘ಅರ್ಬನ್ ನಕ್ಸಲ್’ ಎಂದು ಹೇಳಿದ್ದಾರೆ.
ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ ಸುಳ್ಳಿನ ಸಿನಿಮಾಗಳ ಪೋಸ್ಟರ್ ಸಹ ಹಾಕುವುದಿಲ್ಲ’ ಎಂದು ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದರು. ಬಿಜೆಪಿಗರು ದೆಹಲಿಯಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಕೇಳುತ್ತಿದ್ದಾರೆ. ಆ ಚಿತ್ರದ ನಿರ್ಮಾಣ ಮಾಡಿರುವವರು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಬಹುದು. ಇದರಿಂದ ಸಿನಿಮಾವನ್ನು ಉಚಿತವಾಗೇ ನೋಡಲು ಸಾಧ್ಯವಾಗುತ್ತದೆ ಎಂದು ಟೀಕಿಸಿದ್ದರು.