ಅಹಮದ್ ನಗರ: ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ತಮ್ಮ ಕೃತ್ಯಗಳಿಂದಲೇ ಬಂಧನಕ್ಕೆ ಒಳಗಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ಧಾರೆ.
ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಮಾತನಾಡಿದ ಅಣ್ಣಾ ಹಜಾರೆ, ನಾನು ಅರವಿಂದ ಕೇಜ್ರಿವಾಲ್ ಅವರ ವಿಚಾರವಾಗಿ ತುಂಬಾನೇ ಬೇಸರಗೊಂಡಿದ್ಧೇನೆ. ಆತ ನನ್ನೊಂದಿಗೆ ಸೇರಿ ಮದ್ಯದ ವಿರುದ್ಧ ದನಿ ಎತ್ತಿದ್ದರು. ಆದರೆ ತಮ್ಮದೇ ಸರ್ಕಾರ ರಚಿಸಿದ ಬಳಿಕ ಮದ್ಯದ ನೀತಿ ಜಾರಿಗೆ ತರಲು ಹೊರಟರು. ಹೀಗಾಗಿ ಅವರ ಕೆಲಸಗಳೇ ಅವರನ್ನು ಬಂಧನ ಆಗುವಂತೆ ಮಾಡಿದೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
“ನನ್ನೊಂದಿಗೆ ಕೆಲಸ ಮಾಡುತ್ತಿದ್ದ ಮತ್ತು ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಅರವಿಂದ್ ಕೇಜ್ರಿವಾಲ್ ಅವರಂತಹ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ನನಗೆ ತುಂಬಾ ದುಃಖವಾಗಿದೆ” ಎಂದು ಅವರು ಹೇಳಿದರು.