ನವದೆಹಲಿ: ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಬಿಐ ಸಮಯ ಕೇಳಿದ ಹಿನ್ನಲೆ ಒಂದು ವಾರದ ಕಾಲಾವಕಾಶ ನೀಡಿದೆ.
ಇದಕ್ಕೂ ಮುನ್ನ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಂಟರ್ ಅಫಿಡವಿಟ್ ಸಲ್ಲಿಸಿದೆ. ಇದರಲ್ಲಿ ವಿವಾದಾತ್ಮಕ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ, ಕೇಜ್ರಿವಾಲ್ ಅವರ ಬಂಧನವು ಕಾನೂನುಬದ್ಧವಾಗಿದೆ, ದೆಹಲಿ ಹೈಕೋರ್ಟ್ ಈಗಾಗಲೇ ಕೇಜ್ರಿವಾಲ್ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ ಎಂದು ಹೇಳಿದೆ.