Home ಟಾಪ್ ಸುದ್ದಿಗಳು ಕೇಜ್ರಿವಾಲ್ ನಿವಾಸ ಧ್ವಂಸ ಪ್ರಕರಣ: ಠಾಣೆಗೆ ಹಾಜರಾಗುವಂತೆ ತೇಜಸ್ವಿ ಸೂರ್ಯಗೆ ಸೂಚನೆ

ಕೇಜ್ರಿವಾಲ್ ನಿವಾಸ ಧ್ವಂಸ ಪ್ರಕರಣ: ಠಾಣೆಗೆ ಹಾಜರಾಗುವಂತೆ ತೇಜಸ್ವಿ ಸೂರ್ಯಗೆ ಸೂಚನೆ

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಏಪ್ರಿಲ್ 28 ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಲು ಆದೇಶಿಸಲಾಗಿದೆ. ಈಗಾಗಲೇ ಮಾಜಿ ಮೇಯರ್ ಜಯಪ್ರಕಾಶ್ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ವಾಸು ರುಖ್ದ್ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.

ಏಪ್ರಿಲ್ 1 ರಂದು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಮುಖ್ಯಮಂತ್ರಿ ನಿವಾಸದ ಬಳಿ ಪ್ರತಿಭಟನೆ ನಡೆಸಿತ್ತು. ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿರುವ ಹೇಳಿಕೆ ವಿರೋಧಿಸಿ ಈ ಪ್ರತಿಭಟನೆ ಕೈಗೊಳ್ಳಲಾಗಿತ್ತು. ಈ ಪ್ರತಿಭಟನೆ ವೇಳೆ ಕೆಲವರು ಮುಖ್ಯಮಂತ್ರಿ ನಿವಾಸದ ಹೊರಗೆ ಹೋಗಿ ಧ್ವಂಸ ಮಾಡಿದರು.

ಬೂಮ್ ಬ್ಯಾರಿಯರ್ ಮತ್ತು ಸಿಸಿಟಿವಿ ಒಡೆದಿದ್ದಲ್ಲದೇ, ಮುಖ್ಯ ಗೇಟ್ ಗೆ ಬಣ್ಣ ಎರಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸಿವಿಲ್ ಲೈನ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು 8 ಆರೋಪಿಗಳನ್ನು ಬಂಧಿಸಿದ್ದರು.

Join Whatsapp
Exit mobile version