ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2ರವರೆಗೆ ವಿಸ್ತರಣೆ

Prasthutha|

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ. ಕವಿತಾ ಮತ್ತು ಇತರರ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿದೆ.

- Advertisement -

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಬಂಧನವನ್ನು ವಿಸ್ತರಿಸಿದ್ದಾರೆ.

ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಈ ಪ್ರಕರಣದಲ್ಲಿ ಜಾಮೀನು ಬಾಂಡ್ ಸಲ್ಲಿಸದ ಕಾರಣ ಇಲ್ಲಿನ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾರೆ.



Join Whatsapp