Home ಟಾಪ್ ಸುದ್ದಿಗಳು ಜಾಮೀನು ಅವಧಿ ವಿಸ್ತರಣೆ ಕೋರಿ ಕೇಜ್ರಿವಾಲ್ ಮನವಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಜಾಮೀನು ಅವಧಿ ವಿಸ್ತರಣೆ ಕೋರಿ ಕೇಜ್ರಿವಾಲ್ ಮನವಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕೋಟ್ ಹೇಳಿದೆ.
ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸಬೇಕು ಎಂದು ಕೋರಿ ಕೇಜ್ರಿವಾಲ್ ಅವರು, ಸುಪ್ರೀಂ ಕೋರ್ಟ್ಗೆ ಸೋಮವಾರ ಅರ್ಜಿ ಸಲ್ಲಿಸಿದ್ದರು. ಅವರು ಸುಪ್ರೀಂ ಕೋರ್ಟ್ನ ಸೂಚನೆಯ ಪ್ರಕಾರ ಜೂನ್ 2ರಂದು ಜೈಲಿಗೆ ವಾಪಸ್ ಆಗಬೇಕಿದೆ.


ಪಿಇಟಿ–ಸಿಟಿ ಪರೀಕ್ಷೆ ಸೇರಿದಂತೆ ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವ ಕಾರಣಕ್ಕೆ ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಅವರು ಕೋರಿದ್ದರು.

Join Whatsapp
Exit mobile version