ಶಿವಮೊಗ್ಗ: ಕೋವಿಡ್ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅದನ್ನು (ಕೆಂಪಣ್ಣ ಆಯೋಗದ ವರದಿ) ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್ ನಲ್ಲಿ ಈ ಪ್ರಕರಣದ ಬಗ್ಗೆ ವಾದ ಪ್ರತಿವಾದ ಆಗಿದೆ. ಸಿಎಂ ಪರ ವಕೀಲರು ವಾದ ಮಾಡಲು ಸಮಯ ಕೇಳುತ್ತಿದ್ದಾರೆ ಎಂದರು.