ವಿಮಾನ ಟೇಕಾಫ್ ವೇಳೆ ದೋಷ | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ

Prasthutha|

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಿಸಲಾಗಿದೆ. 78 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡುಬಂದುದರಿಂದ, ಎಮರ್ಜೆನ್ಸಿ ಘೋಷಿಸಲಾಗಿದೆ.

ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡು ಬಂದಿದ್ದು, ವಿಷಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

- Advertisement -

ಬಳಿಕ, ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಷ ಮಾಡಿಸಲಾಗಿದೆ ಎಂದು ತಿಳಿದು ಬಂದಿದೆ. ಎಮರ್ಜೆನ್ಸಿ ಘೋಷಿಸಿದ ಕಾರಣ ವಿಮಾನ ನಿಲ್ದಾಣದಲ್ಲಿ ಕೆಲವು ಕ್ಷಣ ಆತಂಕ ಸೃಷ್ಟಿಯಾಯಿತು ಎಂದು ವರದಿಗಳು ತಿಳಿಸಿವೆ.

- Advertisement -