ಬೆಂಗಳೂರು: ಪ್ರತಿಷ್ಠಿತ 2022 ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಪೋರ್ಟ್ ಪ್ರಶಸ್ತಿ ಸಮಾರಂಭದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಜಾಗತಿಕವಾಗಿ ನಡೆಸಲ್ಪಟ್ಟ ಗ್ರಾಹಕರ ಸಮೀಕ್ಷೆಯನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ. “ಚೆಕ್-ಇನ್ನಿಂದ ಆಗಮನ, ವರ್ಗಾವಣೆಗಳು, ಶಾಪಿಂಗ್, ಭದ್ರತೆ, ವಲಸೆ, ಗೇಟ್ ಗಳಲ್ಲಿ ನಿರ್ಗಮನದವರೆಗೆ, ಸಮೀಕ್ಷೆಯು ವಿಮಾನ ನಿಲ್ದಾಣ ಸೇವೆಯಾದ್ಯಂತ ಗ್ರಾಹಕರ ಅನುಭವ ಮತ್ತು ಪ್ರಮುಖ ಕಾರ್ಯಕ್ಷಮತೆಯ ಅಂಶಗಳ ಮೌಲ್ಯಮಾಪನದ ಆಧಾರದ ಮೇಲೆ ಪ್ರಶಸ್ತಿ ಪಡೆದುಕೊಂಡಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಪ್ಯಾರಿಸ್ ನಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬೆಂಗಳೂರು ಇಂಟರ್ ನ್ಯಾಶನಲ್ ಏರ್ ಪೋರ್ಟ್ ಲಿಮಿಟೆಡ್ನ ಏರ್ಪೋರ್ಟ್ ಆಪರೇಟರ್ ಎಂಡಿ ಮತ್ತು ಸಿಇಒ ಹರಿ ಕೆ ಮಾರಾರ್, ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎಂಬ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನಮಗೆ ಅಪಾರ ಸಂತೋಷವನ್ನು ತಂದಿದೆ. ನಾವು ಇನ್ನು ಹೆಚ್ಚಿನ ಸೌಲಭ್ಯ ಕೊಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.