ಕೇರಳ: ಭೀಕರ ಭೂಕುಸಿತಕ್ಕೆ ನಾಲ್ಕು ವಲಸೆ ಕಾರ್ಮಿಕರು ಬಲಿ

Prasthutha|

ಕೊಚ್ಚಿನ್: ನಿರ್ಮಾಣ ಹಂತದ ಕಟ್ಟಡದ ಸಮೀಪದಲ್ಲಿ ನಡೆದ ಭೀಕರ ಭೂಕುಸಿತದಿಂದಾಗಿ ನಾಲ್ವರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೇರಳದ ಕೊಚ್ಚಿನ್ ನಲ್ಲಿ ನಡೆದಿದೆ.

- Advertisement -

ಮಾತ್ರವಲ್ಲ ಒಬ್ಬ ಕಾರ್ಮಿಕ ಮಣ್ಣುನಡಿಯಲ್ಲಿ ಹೂತು ಹೋಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಕನಿಷ್ಠ ಏಳು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿರುವ ಏಳನೇ ವ್ಯಕ್ತಿಗಾಗಿ ಶೋಧ ಮುಂದುವರಿಸಲಾಗಿದೆ ಎಂದು ಹೇಳಲಾಗಿದೆ.

- Advertisement -

ಶುಕ್ರವಾರ ಮಧ್ಯಾಹ್ನ ಕೊಚ್ಚಿ ಸಮೀಪದ ಕಲಮಸ್ಸೆರಿಯಲ್ಲಿ ಖಾಸಗಿ ಕಂಪೆನಿಯೊಂದರ ಗೋದಾಮು ನಿರ್ಮಾಣಕ್ಕಾಗಿ ಕಾರ್ಮಿಕರು ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.




Join Whatsapp