Home ಟಾಪ್ ಸುದ್ದಿಗಳು ಅಮೆರಿಕ: ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ

ಅಮೆರಿಕ: ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ

ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.


ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ.

ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್ ರೂಮ್ ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು. ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು, ಬಾತ್ ರೂಮ್ ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮನೆಯಲ್ಲಿ ಯಾರೋ ಅಪರಿಚಿತರು ಬಂದಿರುವ ಯಾವುದೇ ಲಕ್ಷಣಗಳಿರಲಿಲ್ಲ. ಆದರೆ ಕಿಟಕಿ ತೆರೆದಿತ್ತು ಅಲ್ಲಿಂದ ಯಾರಾದರೂ ಮನೆಯ ಒಳಗೆ ಬಂದಿದ್ದರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

Join Whatsapp
Exit mobile version