ಕೇರಳ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ‘ಮೆಟ್ರೋ ಮ್ಯಾನ್’ ಇ ಶ್ರೀಧರನ್ ಘೋಷಣೆ

Prasthutha|

ತಿರುವನಂತಪುರಂ : ಭಾರತೀಯ ಜನತಾ ಪಕ್ಷ, ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮೆಟ್ರೋ ಮ್ಯಾನ್ ಖ್ಯಾತಿಯ ಇ ಶ್ರೀಧರನ್ ಅವರನ್ನು ಗುರುವಾರ ಘೋಷಸಿತು.

- Advertisement -

ವಾರಗಳ ಹಿಂದೆಯಷ್ಟೇ ಶ್ರೀಧರನ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ತಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ತನ್ನ ಆಸಕ್ತಿಯನ್ನೂ ಬಹಿರಂಗಪಡಿಸಿದ್ದರು.

ಈ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್ ಶ್ರೀಧರನ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ್ದು , ಶ್ರೀಧರನ್ ಮುಂಬರುವ ಕೇರಳ ವಿಧಾನ ಸಭೆಯ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

- Advertisement -