ಲಂಚ ಪ್ರಕರಣ: ವಿಚಾರಣೆಗೆ ಹಾಜರಾದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್

Prasthutha|

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನಾಮಪತ್ರವನ್ನು ಹಿಂಪಡೆಯಲು ಬಿಎಸ್ಪಿ ಅಭ್ಯರ್ಥಿಗೆ 2.5 ಲಕ್ಷ ರೂಪಾಯಿ ಲಂಚ ನೀಡಿದ ಪ್ರಕರಣದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಕಾಸರಗೋಡು ಜಿಲ್ಲಾ ಕ್ರೈಮ್ ಬ್ರಾಂಚ್ ಪ್ರಧಾನ ಕಚೇರಿಯಲ್ಲಿ ಡಿವೈಎಸ್ಪಿ ಎ ಸತೀಶ್ ಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಆರಂಭವಾಯಿತು. ಬಿಎಸ್ಪಿ ಅಭ್ಯರ್ಥಿ ಕೆ ಸುಂದರ ಅವರ ಹೇಳಿಕೆಯ ಪ್ರಕಾರ, ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

- Advertisement -

ಮಂಜೇಶ್ವರದಲ್ಲಿ ಸ್ಪರ್ಧಿಸಿದ್ದ ಕೆ.ಸುರೇಂದ್ರನ್ ಹೆಸರನ್ನು ಹೋಲುವ ಕೆ.ಸುಂದರ ಅವರ ನಾಮಪತ್ರವನ್ನು ಹಿಂಪಡೆದರೆ 15 ಲಕ್ಷ ರೂ. ಹಾಗೂ ಕರ್ನಾಟಕದಲ್ಲಿ ವೈನ್ ಶಾಪ್ ನೀಡುವುದಾಗಿ ಆಮಿಷ ಒಡ್ಡಲಾಗಿತ್ತು.

- Advertisement -