ತಿರುವನಂತಪುರ: ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರು ಸ್ತಬ್ಧಚಿತ್ರಕ್ಕೆ ಅವಕಾಶ ನೀಡಲು ಪ್ರಧಾನಿ ಮೋದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ.
ಈ ಕುರಿತು ಮೋದಿ ಅವರಿಗೆ ಪತ್ರ ಬರೆದ ಪಿಣರಾಯಿ ವಿಜಯನ್, ‘ಪ್ರಸ್ತಾವಿತ ಸ್ತಬ್ಧಚಿತ್ರವು ಪ್ರಬಲ ಸಾಮಾಜಿಕ ಸಂದೇಶವನ್ನು ಒಳಗೊಂಡಿದೆ. ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ಹೆಚ್ಚು ಪ್ರಸ್ತುತವಾಗಿದೆ. ಕೇರಳದ ನವೋದಯ ಚಳವಳಿಯ ನೇತೃತ್ವ ವಹಿಸಿದ್ದ ಶ್ರೀ ನಾರಾಯಣ ಗುರುಗಳ ಚಿಂತನೆಗಳು ವಿಶ್ವದಾದ್ಯಂತ ಗಮನ ಸೆಳೆದಿದ್ದವು. ಇದರ ಚಿತ್ರಣ ಸ್ತಬ್ಧಚಿತ್ರದಲ್ಲಿ ಅಡಕಗೊಂಡಿದೆ. ಹೀಗಾಗಿ ಸ್ತಬ್ಧಚಿತ್ರವು ಯುವ ಪೀಳಿಗೆಗೆ ಅಮೂಲ್ಯ ಸಂದೇಶವನ್ನು ಸಾರಲಿದೆ. ಆದ್ದರಿಂದ ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇರಳದ ಸ್ತಬ್ಧಚಿತ್ರವನ್ನು ಸೇರಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನಾರಾಯಣ ಗುರು ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರದ ನಿರ್ಧಾರಕ್ಕೆ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.