ತಿರುವನಂತಪುರಂ: ರಾಜಭವನ ಮತ್ತು ಕೇರಳ ಸರ್ಕಾರದ ನಡುವಿನ ಜಗಳ ತಾರಕಕ್ಕೇರಿದ್ದು, ಸಿಪಿಐಎಂ ಆಡಳಿತವಿರುವ ಕೇರಳದಲ್ಲಿ ಶ್ರೀಮಂತ ಪ್ರಭುತ್ವ ವ್ಯವಸ್ಥೆ ಚಾಲ್ತಿಯಲ್ಲಿದೆ ಎಂದು ಕೇರಳ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಆರೋಪಿಸಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇಮಿಸಲಾಗುತ್ತಿದೆ ಎಂದೂ ಅವರು ಆರೋಪಿಸಿದ್ದಾರೆ.
ಸಿಪಿಐ(ಎಂ) ಕಾರ್ಯಕರ್ತರ ಆದ್ಯತಾ ಪಟ್ಟಿಯನ್ನು ಪೌರ ಸಂಸ್ಥೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ನೇಮಕ ಮಾಡುವಂತೆ ತಿರುವನಂತಪುರಂ ಮೇಯರ್ ಕಚೇರಿಯಿಂದ ಬಂದಿರುವ ಪತ್ರದ ವರದಿಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಹೇಳಿಕೆ ನೀಡಿದ್ದಾರೆ.