Home ಟಾಪ್ ಸುದ್ದಿಗಳು ‘ಕಾಂತಾರ’ ವಿರುದ್ಧ ಕಾಪಿರೈಟ್ ಆರೋಪ: ಕಾನೂನು ಕ್ರಮಕ್ಕೆ ಮುಂದಾದ ಕೇರಳದ ಸಂಸ್ಥೆ

‘ಕಾಂತಾರ’ ವಿರುದ್ಧ ಕಾಪಿರೈಟ್ ಆರೋಪ: ಕಾನೂನು ಕ್ರಮಕ್ಕೆ ಮುಂದಾದ ಕೇರಳದ ಸಂಸ್ಥೆ

ಬೆಂಗಳೂರು: ‘ಕಾಂತಾರ’ ಚಿತ್ರದ ಹಾಡೊಂದಕ್ಕೆ ಕೃತಿ ಚೌರ್ಯದ ಆರೋಪ ಕೇಳಿಬಂದಿದೆ. ಈ ವಿಷಯವಾಗಿ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ಮುಂದಾಗಿದೆ.


ಥೈಕ್ಕುಡಮ್ ಬ್ರಿಡ್ಜ್ ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕು ಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ‘ಥೈಕ್ಕುಡಮ್ ಬ್ರಿಡ್ಜ್’ ತನ್ನ ಪೋಸ್ಟ್ ನಲ್ಲಿ ಉಲ್ಲೇಖಿಸಿದೆ.


ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ’ ಭಾರತದಲ್ಲಿ ಭಾರೀ ಜನಪ್ರಿಯತೆ ಪಡೆದಿದ್ದು, ಉತ್ತಮ ಗಳಿಕೆಯೂ ಮಾಡಿದೆ.

Join Whatsapp
Exit mobile version