ಕೇರಳ: ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಸಾವು

Prasthutha|

- Advertisement -

ತಿರುವನಂತಪುರ: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರನೂರ್‌ನಲ್ಲಿ ಎಕ್ಸ್‌ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಮೃತರನ್ನು ತಮಿಳುನಾಡು ಮೂಲದ ವಲ್ಲಿ, ರಾಣಿ, ಲಕ್ಷ್ಮಣ್ ಹಾಗೂ ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.

- Advertisement -

ಘಟನಾ ಸ್ಥಳದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೋರ್ವ ಕಾರ್ಮಿಕ, ಭಾರತಪುಳ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಆತನನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶೊರನೂರ್ ಸೇತುವೆ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದ ಕಾರ್ಮಿಕರಿಗೆ ಮಧ್ಯಾಹ್ನ 3:05ರ ಸುಮಾರಿಗೆ ನವದೆಹಲಿ-ತಿರುವನಂತಪುರ ರೈಲು ಡಿಕ್ಕಿ ಹೊಡೆದಿದೆ. ಕಾರ್ಮಿಕರು ರೈಲು ಬರುವುದನ್ನು ಗಮನಿಸದೇ ಇದ್ದುದರಿಂದ ಈ ಘಟನೆ ಸಂಭವಿಸಿರಬಹುದು. ಇದರ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Join Whatsapp