Home ಟಾಪ್ ಸುದ್ದಿಗಳು ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸರ್ಕಾರದ ಹಸ್ತಕ್ಷೇಪದ ಬಗ್ಗೆ ಸಿಬಿಐ ತನಿಖೆಗಾಗಿ ಪ್ರಧಾನಿಗೆ ಸ್ವಪ್ನಾ ಸುರೇಶ್...

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸರ್ಕಾರದ ಹಸ್ತಕ್ಷೇಪದ ಬಗ್ಗೆ ಸಿಬಿಐ ತನಿಖೆಗಾಗಿ ಪ್ರಧಾನಿಗೆ ಸ್ವಪ್ನಾ ಸುರೇಶ್ ಪತ್ರ

ತಿರುವನಂತಪುರಂ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಪ್ರಕರಣದಲ್ಲಿ ಕೇರಳ ಸರ್ಕಾರ ಭಾಗಿಯಾಗಿರುವ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿದ್ದಾರೆ.

ಕೇರಳ ಸರ್ಕಾರವು ಇಂತಹ ವಂಚನೆಯಲ್ಲಿ ಭಾಗಿಯಾಗಿದೆ ಮತ್ತು ಅವರ ಅನುಕೂಲಕ್ಕಾಗಿ ತನ್ನನ್ನು ಬಲಿಪಶು ಮಾಡಲಾಗಿದೆ ಎಂದು ಸ್ವಪ್ನಾ ಪತ್ರದಲ್ಲಿ ಆರೋಪಿಸಿದ್ದಾರೆ.

ಕೇರಳ ಸಿಎಂ ಅವರ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರು ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಸ್ವಪ್ನಾ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ಪ್ರಧಾನಿಯನ್ನು ಭೇಟಿಯಾಗುವ ಅವಕಾಶವನ್ನು ಸ್ವಪ್ನಾ ಸುರೇಶ್ ಕೋರಿದ್ದಾರೆ.

Join Whatsapp
Exit mobile version