ನವದೆಹಲಿ: ಕೇಂದ್ರ ಸರ್ಕಾರದಿಂದ ಆಗುತ್ತಿರುವ ತೆರಿಗೆ ಅನ್ಯಾಯದ ವಿರುದ್ಧ ಕೇರಳದ ಆಡಳಿತರೂಢ ಎಲ್ ಡಿಎಫ್ ಸರ್ಕಾರ ಗುರುವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿತು.
‘ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ’ ಎಂಬ ಹೆಸರಿನಡಿ ಪ್ರತಿಭಟನೆ ಆರಂಭಿಸಿರುವ ಪಕ್ಷದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
#WATCH | Kerala CM Pinarayi Vijayan along with party leaders stage protest against Central government over 'financial injustice' at Jantar Mantar, in Delhi. pic.twitter.com/ElVIKb9EKJ
— ANI (@ANI) February 8, 2024