ಪ್ರವಾಸಿ ದೋಣಿ ದುರಂತ: ಮೃತ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ

Prasthutha|

ತಿರುವನಂತಪುರಂ: ಪ್ರವಾಸಿ ದೋಣಿ ಮುಳುಗಡೆಯಾಗಿ 22 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಕೇರಳ ಸರ್ಕಾರ ತಲಾ 10 ಲಕ್ಷ ಪರಿಹಾರ ನೀಡಿದೆ.

- Advertisement -


ಪ್ರವಾಸಿ ದೋಣಿ ದುರಂತ ಸಂಬಂಧ ಕೇರಳ ಸರ್ಕಾರವು ಸಂಪೂರ್ಣ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಕೂಡ ಸರ್ಕಾರವೇ ಭರಿಸಲಿದೆ. ಪೊಲೀಸ್ ವಿಶೇಷ ತನಿಖಾ ತಂಡವು ಈ ಸಂಬಂಧ ತನಿಖೆ ನಡೆಸಲಿದೆ ಎಂದು ಸಿಎಂಒ ಮಾಹಿತಿ ನೀಡಿದೆ.
ಇತ್ತ ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ. ಘೋಷಿಸಿದ್ದಾರೆ.