Home ಟಾಪ್ ಸುದ್ದಿಗಳು ಪ್ರವಾಸಿ ದೋಣಿ ದುರಂತ: ಮೃತ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ

ಪ್ರವಾಸಿ ದೋಣಿ ದುರಂತ: ಮೃತ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ

ತಿರುವನಂತಪುರಂ: ಪ್ರವಾಸಿ ದೋಣಿ ಮುಳುಗಡೆಯಾಗಿ 22 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಕೇರಳ ಸರ್ಕಾರ ತಲಾ 10 ಲಕ್ಷ ಪರಿಹಾರ ನೀಡಿದೆ.


ಪ್ರವಾಸಿ ದೋಣಿ ದುರಂತ ಸಂಬಂಧ ಕೇರಳ ಸರ್ಕಾರವು ಸಂಪೂರ್ಣ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಕೂಡ ಸರ್ಕಾರವೇ ಭರಿಸಲಿದೆ. ಪೊಲೀಸ್ ವಿಶೇಷ ತನಿಖಾ ತಂಡವು ಈ ಸಂಬಂಧ ತನಿಖೆ ನಡೆಸಲಿದೆ ಎಂದು ಸಿಎಂಒ ಮಾಹಿತಿ ನೀಡಿದೆ.
ಇತ್ತ ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ. ಘೋಷಿಸಿದ್ದಾರೆ.

Join Whatsapp
Exit mobile version