ಕೇರಳ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಕಾರು ತಡೆದು ನಿಂದನೆ: ವ್ಯಕ್ತಿ ಬಂಧನ

Prasthutha|

ಕೊಚ್ಚಿ: ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಮಣಿಕುಮಾರ್ ಅವರ ಅಧಿಕೃತ ಕಾರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

- Advertisement -

ಕೊಚ್ಚಿಯ ಗೋಶ್ರೀ ಸೇತುವೆ ಬಳಿ ಈ ಘಟನೆ ನಡೆದಿದ್ದು,  ಪೊಲೀಸರು ವ್ಯಕ್ತಿಯ ವಿರುದ್ಧ ಕೊಲೆಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ.

ಇಡುಕ್ಕಿ ಜಿಲ್ಲೆಯ ಟಿಜೋ ಎಂಬಾತ ಭಾನುವಾರ ತಡರಾತ್ರಿ ಮದ್ಯದ ಅಮಲಿನಲ್ಲಿ ಮುಖ್ಯ ನ್ಯಾಯಾಧೀಶರ ಕಾರನ್ನು ತಡೆದು, ನಿಂದಿಸಿದ್ದ.

- Advertisement -

ಕೂಡಲೇ ಮುಖ್ಯ ನ್ಯಾಯಾಧೀಶರ ವೈಯಕ್ತಿಕ ಭದ್ರತಾ ಪೊಲೀಸರು ಟಿಜೋನನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ಯಾವ ಕಾರಣಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳನ್ನು ನಿಂದಿಸಿದ ಎನ್ನುವ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.

Join Whatsapp