ಕೋಝಿಕ್ಕೋಡ್ (ಕೇರಳ): ಮದುವೆ ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿ ಅದೇ ಬೆಂಕಿಗೆ ಬೆಂದು ಯುವಕನೋರ್ವ ಸಾವನ್ನಪ್ಪಿದ ಘಟನೆ ಕೋಝಿಕ್ಕೋಡ್ ನ ನಾದಪುರಂನಲ್ಲಿ ನಡೆದಿದೆ.
ಇಂದು ಮುಂಜಾನೆ ಇಲ್ಲಿನ ನಾದಪುರಂ ಬಳಿಯ ಜಾತಿಯೇರಿಯಲ್ಲಿರುವ ಯುವತಿಯ ಮನೆಯಲ್ಲಿ ಈ ಘಟನೆ ನಡೆದಿದ್ದು, ರತ್ನೇಶ್ ಎಂಬ ವ್ಯಕ್ತಿ ಮಹಿಳೆಯನ್ನು ಮದುವೆಯಾಗಲು ಬಯಸಿದ್ದ, ಆದರೆ ಆಕೆಯ ಸಂಬಂಧಿಕರು ಇದನ್ನು ವಿರೋಧಿಸಿ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹವನ್ನು ನಿಶ್ಚಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಎಲೆಕ್ಟ್ರಿಷಿಯನ್ ಆಗಿದ್ದ ರತ್ನೇಶ್ ಎಂಬಾತ ಮನೆಯ ಮೊದಲ ಮಹಡಿಯಲ್ಲಿದ್ದ ಮಹಿಳೆ ಮಲಗುವ ಕೋಣೆಗೆ ಏಣಿ ಬಳಸಿ ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಮಹಿಳೆ, ಆಕೆಯ ಸಹೋದರ ಮತ್ತು ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.