ಕೇರಳ: ಲೋಕಸೇವಾ ಆಯೋಗ (ಪಿಎಸ್ ಸಿ) ಪರೀಕ್ಷೆಯಲ್ಲಿ ಒಟ್ಟಿಗೆ ತೇರ್ಗಡೆಯಾದ ತಾಯಿ – ಮಗ

Prasthutha|

ತಿರುವನಂತಪುರಂ: ಕೇರಳದ ಮಲಪ್ಪುರಂನಲ್ಲಿ ತಾಯಿ ಮತ್ತು ಮಗ ಇಬ್ಬರೂ ಒಟ್ಟಿಗೆ ಲೋಕಸೇವಾ ಆಯೋಗದ (ಪಿಎಸ್ ಸಿ) ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಗಮನ ಸೆಳೆದಿದ್ದಾರೆ.

- Advertisement -

ಕೇರಳದ ಮಲಪ್ಪುರಂನ 42 ವರ್ಷದ ಬಿಂದು ಅವರು ಎಲ್ ಜಿಎಸ್ ಪರೀಕ್ಷೆಯಲ್ಲಿ 92ನೇ ರ್‍ಯಾಂಕ್ ನೊಂದಿಗೆ ತೇರ್ಗಡೆಯಾಗಿದ್ದರೆ, ಅವರ 24 ವರ್ಷದ ಮಗ ವಿವೇಕ್ ಎಲ್ ಡಿಸಿ ಪರೀಕ್ಷೆಯಲ್ಲಿ 38ನೇ ರ್‍ಯಾಂಕ್ ಪಡೆದಿದ್ದಾರೆ.

10ನೇ ತರಗತಿಯಲ್ಲಿ ತನ್ನ ಮಗನನ್ನು ಓದಲು ಪ್ರೋತ್ಸಾಹಿಸಲು ಪುಸ್ತಕಗಳನ್ನು ಓದಲು ಪ್ರಾರಂಭಿಸಿದ್ದ ಬಿಂದು ಅವರಿಗೆ ಇದು  ನಂತರ ನಿರಂತರ ಕಲಿಕೆಯಿಂದ ಕೇರಳ ಲೋಕಸೇವಾ ಆಯೋಗದ (ಪಿಎಸ್ಸಿ) ಪರೀಕ್ಷೆಯಲ್ಲಿ ತೇರ್ಗಡೆಯಾಗುವಂತೆ ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

- Advertisement -

ಸದ್ಯ ಬಿಂದು ಅವರು ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

“ನಾವು ಕೋಚಿಂಗ್ ತರಗತಿಗಳಿಗೆ ಒಟ್ಟಿಗೆ ಹೋಗುತ್ತಿದ್ದೆವು. ನನ್ನ ತಂದೆ ನಮಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಟ್ಟರು. ನಮ್ಮ ಶಿಕ್ಷಕರಿಂದ ನಮಗೆ ಸಾಕಷ್ಟು ಪ್ರೇರಣೆ ಸಿಕ್ಕಿತು. ನಾವಿಬ್ಬರೂ ಒಟ್ಟಿಗೆ ಅಧ್ಯಯನ ಮಾಡಿದೆವು ಆದರೆ ನಾವು ಒಟ್ಟಿಗೆ ಅರ್ಹತೆ ಪಡೆಯುತ್ತೇವೆ ಎಂದು ಎಂದಿಗೂ ಯೋಚಿಸಿರಲಿಲ್ಲ ಎಂದು ಬಿಂದು ಅವರ ಮಗ ವಿವೇಕ್ ಪ್ರತಿಕ್ರಿಯಿಸಿದ್ದಾರೆ.

Join Whatsapp