ನಿಫಾ ವೈರಸ್ ಗೆ ಕೇರಳದಲ್ಲಿ ಇಬ್ಬರು ಸಾವು: ಆರೋಗ್ಯ ಇಲಾಖೆ ಎಚ್ಚರಿಕೆ

Prasthutha|


ತಿರುವನಂತಪುರಂ: ನಿಫಾ ವೈರಸ್‌ನಿಂದ ಇಬ್ಬರು ಸಾವನಪ್ಪಿರುವ ಶಂಕೆ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆ ಸೋಮವಾರ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

- Advertisement -

ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಸೋಮವಾರ ರಾತ್ರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಈ ಹಿಂದೆ 2018ರಲ್ಲಿ ಕೋಯಿಕ್ಕೋಡ್​ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ನಿಫಾ ಏಕಾಏಕಿ ಹಬ್ಬಿತ್ತು ನಂತರ 2021ರಲ್ಲಿ ಕೂಡ ಪ್ರಕರಣಗಳು ವರದಿಯಾಗಿತ್ತು.

- Advertisement -

ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ನಿಫಾ ವೈರಸ್ ಬಾವಲಿಗಳಿಂದ ಹರಡುತ್ತದೆ. ಇದು ಮನುಷ್ಯ ಹಾಗೂ ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ಕಾಯಿಲೆಯ ಜತೆಗೆ ಇದು ಜ್ವರ, ಸ್ನಾಯು ಸೆಳೆತ, ತಲೆನೋವು, ತಲೆತಿರುಗುವಿಕೆ ಮತ್ತು ವಾಕರಿಕೆಗೆ ಕಾರಣವಾಗುತ್ತದೆ.

Join Whatsapp