Home ಟಾಪ್ ಸುದ್ದಿಗಳು ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ಕೇರಳ ಮತ್ತೊಮ್ಮೆ ನಂ.1

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ಕೇರಳ ಮತ್ತೊಮ್ಮೆ ನಂ.1

ನವದೆಹಲಿ : ನೀತಿ ಆಯೋಗದ 2020-21ರ ಭಾರತದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ಕೇರಳ ಮತ್ತೊಮ್ಮೆ ತನ್ನ ನಂ.1 ಸ್ಥಾನ ಉಳಿಸಿಕೊಂಡಿದೆ. ಇದೇ ವೇಳೆ ಬಿಹಾರ ಕೊನೆಯ ಸಾಲಿನಲ್ಲುಳಿದು, ಅತ್ಯಂತ ಕಳಪೆ ಸಾಧನೆ ದಾಖಲಿಸಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಪರಿಸರಕ್ಕೆ ಸಂಬಂಧಿಸಿದ ಸುಸ್ಥಿರ ಅಭಿವೃದ್ಧಿಯನ್ನು ಈ ಸೂಚ್ಯಂಕದಲ್ಲಿ ಅಳೆಯಲಾಗುತ್ತದೆ.

75 ಅಂಕಗಳ ಮೂಲಕ ಕೇರಳ ಮೊದಲ ಸ್ಥಾನದಲ್ಲಿ ಗುರುತಿಸಿದ್ದು, ತಮಿಳುನಾಡು ಮತ್ತು ಹಿಮಾಚಲ ಪ್ರದೇಶ ಸೂಚ್ಯಂಕದಲ್ಲಿ ಎರಡನೇ ಸ್ಥಾನ ದಾಖಲಿಸಿವೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ, ಚಂಡೀಗಢ 79 ಅಂಕಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದು, ದೆಹಲಿ ಎರಡನೇ ಸ್ಥಾನದಲ್ಲಿದೆ. 

ಭಾರತದ ಎಸ್‌ಡಿಜಿ ಸೂಚ್ಯಂಕದ ಮೂರನೇ ವರದಿಯನ್ನು ನೀತಿ ಆಯೋಗದ ಅಧ್ಯಕ್ಷ ರಾಜೀವ್‌ ಕುಮಾರ್‌ ಗುರುವಾರ ಬಿಡುಗಡೆಗೊಳಿಸಿದ್ದಾರೆ.

Join Whatsapp
Exit mobile version