ಕೊಟ್ಟಾಯಂ: ಇಲ್ಲಿನ ಪಂಪಾಡಿ ಬಳಿಯ ಹೋಟೆಲ್ವೊಂದರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ ಶವವಾಗಿ ಪತ್ತೆಯಾಗಿದ್ದಾರೆ.
ಹೊಟೆಲ್ ಆವರಣದಲ್ಲಿ ದೀರ್ಘಕಾಲದಿಂದ ನಿಲ್ಲಿಸಿರುವ ಕಾರಿನೊಳಗೆ ವ್ಯಕ್ತಿಯೊಬ್ಬ ಇರುವುದಾಗಿ ಕಂಡುಕೊಂಡ ಹೋಟೆಲ್ ಆಡಳಿತವು ಬಳಿಕ ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದೆ. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಸದ್ಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಥಾಮಸ್ ಅವರಿಗೆ 45 ವರ್ಷ ವಯಸ್ಸಾಗಿತ್ತು. ಅವರು ‘ಅಯ್ಯಪ್ಪನುಮ್ ಕೊಶ್ಯುಮ್’, ‘ನಾಥೋಲಿ ಒರು ಚೆರಿಯ ಮೀನಲ್ಲಾ’, ‘ಒರು ಮುರೈ ವಂತ್ ಪಾಠಯಾ’, ‘ಹ್ಯಾಪಿ ವೆಡ್ಡಿಂಗ್’ ಮತ್ತು ‘ಜೂನ್’ ಸೇರಿದಂತೆ ಇತರ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ.