ಕೇರಳದ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Prasthutha|

- Advertisement -

ತಿರುವನಂತಪುರಂ: ಮೇ 24ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ ನಂತರ ಕೇರಳದಲ್ಲಿ ಹೈ ಅಲರ್ಟ್ ಮಾಡಲಾಗಿದೆ.

ಇಂದು ಮತ್ತು ನಾಳೆ (ಮಂಗಳವಾರ) ಪಥನಾಂತಿಟ್ಟ, ಕೊಟ್ಟಾಯಂ, ಆಲಪ್ಪುಳ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

- Advertisement -

ಕೇರಳ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಮಣ್ಣು ಕುಸಿತದ ಸಾಧ್ಯತೆಗಳಿರುವುದರಿಂದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ತಾಲೂಕು ಕಚೇರಿಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ. ತಮಿಳುನಾಡು, ಪುದುಚೇರಿಯಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯೊಂದಿಗೆ ಹಲವು ಅಥವಾ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



Join Whatsapp