ಕೇರಳದ ಬಡ ಮಕ್ಕಳಿಗೆ ವಿಧಾನಸೌಧ ವೀಕ್ಷಣೆಗೆ ಅನುವು ಮಾಡಿಕೊಟ್ಟ ಸ್ಪೀಕರ್ ಯು.ಟಿ.ಖಾದರ್

Prasthutha|

- Advertisement -

ಬೆಂಗಳೂರು: ಕೇರಳ ರಾಜ್ಯದ ಕುನ್ನಮಂಗಲಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಕ್ಕಳು ಹಾಗೂ ಸ್ಥಳೀಯರಿಗೆ ವಿಧಾನಸೌಧ ವೀಕ್ಷಣೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಸೋಮವಾರ ಅವಕಾಶ ಕಲ್ಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, “ಕೇರಳ ರಾಜ್ಯದ ಕುನ್ನಮಂಗಲಂ ಗ್ರಾಮ ಪಂಚಾಯಿತಿಯ ಸದಸ್ಯರು, ಬಡ ಮಕ್ಕಳು ಹಾಗೂ ಸ್ಥಳೀಯರಿಗೆ ವಿಧಾನಸೌಧದ ವೀಕ್ಷಣೆಗಾಗಿ ಅನುಮತಿ ಕೋರಿ ಪತ್ರ ಬರೆದಿದ್ದರು. ಕರ್ನಾಟಕ ರಾಜ್ಯದ ಪ್ರಮುಖ ಪ್ರವಾಸ ತಾಣವಾದ ವಿಧಾನಸೌಧದ ವೀಕ್ಷಣೆಯನ್ನು ಪ್ರತಿಯೊಬ್ಬರೂ ಮಾಡಲಿ ಎಂದು ಮುಕ್ತವಾಗಿ ಒಪ್ಪಿ, ಅನುಮತಿ ನೀಡಲಾಯಿತು” ಎಂದರು.